ಬಜೆಟ್‌ನ ಹೊಸ ದರ ನಾಳೆಯಿಂದ ಜಾರಿ-ಯಾವುದು ದುಬಾರಿ? ಯಾವುದು ಅಗ್ಗ?

ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಇದೇ ಶನಿವಾರದಿಂದ (ಏಪ್ರಿಲ್‌ 1) ಹೊಸ ಹಣಕಾಸು ವರ್ಷ ಆರಂಭವಾಗಲಿದ್ದು, ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಕೆಲವು ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ಬದಲಾವಣೆಗಳು ಆಗಲಿವೆ. ಹಣದುಬ್ಬರದ ಹೊರೆ ಶ್ರೀಸಾಮಾನ್ಯನ ಮೇಲೆ ಹೆಚ್ಚಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ವಸ್ತುಗಳು ದುಬಾರಿಯಾಗಲಿವೆ. ಇದು ನೇರವಾಗಿ ಜನಸಾಮಾನ್ಯರ […]