ಗಡಿಯಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಉಭಯ ಪಡೆಗಳ ನಿರ್ಧಾರ
ಬೀಜಿಂಗ್: ಗಡಿಯಲ್ಲಿ ಉದ್ಭವಿಸಿರುವ ಯುದ್ಧದ ಸ್ಥಿತಿಯನ್ನು ತಣ್ಣಗಾಗಿಸಲು ಭಾರತ ಹಾಗೂ ಚೀನಾದ ಸೇನಾಪಡೆಗಳು ಮುಂದಾಗಿವೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ. ಎರಡೂ ಕಡೆಗಳ ಉದ್ವಿಗ್ನತೆ ಶಮನ ಮಾಡುವ ಉದ್ದೇಶದಿಂದ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಹಾಗೂ ಟಿಬೆಟ್‌ನ ಮೇಜರ್ ಜನರಲ್ ಲು ಲಿನ್ ನಡುವೆ ಸೋಮವಾರ ಸುದೀರ್ಘ 11 ಗಂಟೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಜೂನ್ 22ರಂದು ನಡೆದ ಕಮಾಂಡರ್ ಹಂತದ ಮಾತುಕತೆಯಲ್ಲಿ ಪರಸ್ಪರರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಗಿತ್ತು. ‘ಕಮಾಂಡರ್ ಮಟ್ಟದ ಮಾತುಕತೆಯಲ್ಲಿ ಮೂಡಿದ್ದ […]
ಗಡಿಯಲ್ಲಿ ಚೀನಾ- ಭಾರತ ಮಧ್ಯೆ ಸಂಘರ್ಷ: ಐದು ಚೀನಾ ಯೋಧರನ್ನು ಹೊಡೆದುರುಳಿಸಿದ ಭಾರತ
ನವದೆಹಲಿ: ಲಡಾಖ್ ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಹಾಗೂ ಚೀನಾ ದೇಶದ ಸೇನಾಪಡೆಯೊಂದಿಗೆ ಸಂಘರ್ಷ ಉಂಟಾಗಿದ್ದು, ಇದರಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಸಹಿತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತ ಚೀನಾದ ಐದು ಸೈನಿಕರನ್ನು ಹೊಡೆದುರಳಿಸಿದೆ ಎಂದು ಸೇನಾಪಡೆ ಮೂಲಗಳು ಹೇಳಿವೆ. ಈ ಸಂಘರ್ಷದಲ್ಲಿ ಚೀನಾದ 11 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದರು. ಭಾರತ […]