ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತದ ಪಂದ್ಯಗಳ ಟಿಕೆಟ್ ಮಾರಾಟ ಇಂದಿನಿಂದ ಶುರು
ಮುಂಬೈ, ಮಹಾರಾಷ್ಟ್ರ: ಇನ್ನು ಕೆಲ ದಿನಗಳಲ್ಲಿ ಭಾರತದಲ್ಲಿ ವಿಶ್ವ ಕ್ರಿಕೆಟ್ ಜಾತ್ರೆ ಶುರುವಾಗಲಿದೆ ( ICC Cricket World Cup ).ಅಕ್ಟೋಬರ್ 5 ರಂದು ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದ ಮುಖಾಂತರ ಅಧಿಕೃತ ಚಾಲನೆ ಸಿಗಲಿದೆ. ಈಗಾಗಲೇ ವಿಶ್ವಕಪ್ನ ವೇಳಾ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ಬುಕ್ಕಿಂಗ್ ಸಹ ಆರಂಭವಾಗಿದೆ. ಇಂದಿನಿಂದ ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತದ ಪಂದ್ಯಗಳಿಗೆ ಟಿಕೆಟ್ ಮಾರಾಟವಾಗಲಿದೆ. ಇದಕ್ಕಾಗಿ ಐಸಿಸಿ ಜೋರಾಗಿಯೇ ಪ್ರಚಾರ ಮಾಡುತ್ತಿದೆ. ಅಕ್ಟೋಬರ್ 5 ರಿಂದ ಭಾರತದಲ್ಲಿ […]