ಒಲಿಂಪಿಕ್ಸ್ ಮಹಿಳಾ ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್‌ ಗೆ ಪ್ರವೇಶಿಸಿದ ಭಾರತ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ‌ ಭಾರತದ ಮಹಿಳಾ ಹಾಕಿ ತಂಡ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 1-0 ಗೋಲುಗಳ ಅಂತರದಲ್ಲಿ ಮಣಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಆ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತ ಹೊಸ ಇತಿಹಾಸ ನಿರ್ಮಾಣ ಮಾಡಿದೆ. 1980ರಲ್ಲಿ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಭಾರತ ಮಹಿಳಾ ಹಾಕಿ ತಂಡದ ಇದುವರೆಗಿನ ಶ್ರೇಷ್ಠ ಸಾಧನೆಯಾಗಿದೆ. ಅಂದು ಒಟ್ಟು ಆರು ತಂಡಗಳು ಸ್ಪರ್ಧಿಸಿತ್ತು. ಆಗಸ್ಟ್ 4ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ ಸವಾಲನ್ನು ಎದುರಿಸಲಿದೆ. ಮಗದೊಂದು ಕ್ವಾರ್ಟರ್‌ನಲ್ಲಿ […]