ಭಾರತ-ಪಾಕ್ ಪಂದ್ಯದ ವೇಳೆ ಅಭಿಮಾನಿಗಳಿಂದ ಅನುಚಿತ ವರ್ತನೆ ಆರೋಪಿಸಿ ಐಸಿಸಿಗೆ ದೂರು ನೀಡಿದ ಪಿಸಿಬಿ
ನವದೆಹಲಿ: ಅಹಮದಾಬಾದ್‌ನಲ್ಲಿ ಅಕ್ಟೋಬರ್ 14ರಂದು ನಡೆದ ಭಾರತ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದ ವೇಳೆ ಆತಿಥೇಯ ಪ್ರೇಕ್ಷಕರು ತೋರಿದ ‘ಅನುಚಿತ ವರ್ತನೆ’ಯ ಬಗ್ಗೆ ಆಕ್ಷೇಪವೆತ್ತಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಐಸಿಸಿಗೆ ದೂರು ನೀಡಿದೆ. ಒಂದು ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಆಸನ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ನ ಬಹುನಿರೀಕ್ಷಿತ ಭಾರತ-ಪಾಕ್ ಪಂದ್ಯದಲ್ಲಿ ಪಾಕ್ ಆಟಗಾರರನ್ನು ಗುರಿಯಾಗಿಸಿಕೊಂಡು ಭಾರತೀಯ ಪ್ರೇಕ್ಷಕರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವರ್ತನೆ ತೋರಿದ್ದಾರೆ. ಇದು ಐಸಿಸಿ ಟೂರ್ನಿ ಆಯೋಜಿಸುವ ಕ್ರಮವಲ್ಲ […]