ಭಾರತ ತಂಡಕ್ಕೆ ಪಾಕ್ ವಿರುದ್ಧ ಆರು ರನ್ ಅಂತರದ ಗೆಲುವು: ಪಂದ್ಯ ಸೋತ ಬಳಿಕ ಅಳುತ್ತಿದ್ದ ಪಾಕ್ ಆಟಗಾರನನ್ನು ಸಂತೈಸಿದ ನಾಯಕ ರೋಹಿತ್ ಶರ್ಮಾ.
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ರವಿವಾರ ಮುಖಾಮುಖಿಯಾಗಿ, ಲೋ ಸ್ಕೋರಿಂಗ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್ ಆರು ರನ್ ಅಂತರದಲ್ಲಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 19 ಓವರ್ ಗಳಲ್ಲಿ 119 ರನ್ ಗೆ ಆಲೌಟಾದರು. ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು 113 ರನ್ ಮಾತ್ರ ಗಳಿಸಲು ಶಕ್ತವಾಯಿತು. ಕೊನೆಯ ಓವರ್ ನಲ್ಲಿ ನಸೀಂ ಶಾ ಪ್ರಯತ್ನಪಟ್ಟರಾದರೂ […]