ಅಂಚೆ ಇಲಾಖೆ ಪಿಂಚಣಿ ಜಮೆಗೆ ಆಧಾರ್ ಜೋಡಣೆ ಕಡ್ಡಾಯ

ಉಡುಪಿ: ಅಂಚೆ ಇಲಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಪಿಂಚಣಿ ವಿತರಣೆಯನ್ನು ಪ್ರಸಕ್ತ ಸಾಲಿನ ಜೂನ್‌ನಿಂದಲೇ ಆಧಾರ್ ಆಧಾರಿತ ವ್ಯವಸ್ಥೆಯಡಿ ಪ್ರಾರಂಭಿಸಲಾಗುತ್ತಿದ್ದು, ಅಂಚೆ ಇಲಾಖೆಯಲ್ಲಿನ ಉಳಿತಾಯ ಖಾತೆಗೆ ಪಿಂಚಣಿ ಜಮೆಯಾಗಲು ಫಲಾನುಭವಿಗಳು ತಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ ರನ್ನು ಸಂಪರ್ಕಿಸಿ, ಆಧಾರ್ ಸಂಖ್ಯೆಯನ್ನು ಜೋಡಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಜೂನ್ 7 ರಂದು ಅಂಚೆ ಅದಾಲತ್

ಉಡುಪಿ : ಉಡುಪಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂನ್ 7 ರಂದು ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂನ್ 5 ರೊಳಗೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ಚರ್ಚಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಉಡುಪಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ- 2023 ರ ಪ್ರಮುಖ ವಿವರಗಳು ಇಲ್ಲಿವೆ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ- ಹೊಸ ಸಣ್ಣ ಉಳಿತಾಯ ಯೋಜನೆಯನ್ನು ಬಜೆಟ್ 2023 ರಲ್ಲಿ ಪರಿಚಯಿಸಲಾಯಿತು. ವಿಶೇಷವಾಗಿ ಮಹಿಳೆಯರಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸಲು ಮಹಿಳಾ ಹೂಡಿಕೆದಾರರಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಮಾರ್ಚ್ 31, 2023 ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಮೂಲಕ ಸರ್ಕಾರವು ಯೋಜನೆಯನ್ನು ಏಪ್ರಿಲ್ 1 ರಿಂದ ಜಾರಿಗೆ ತಂದಿದೆ. ಈ ಯೋಜನೆಯಡಿ ತೆರೆಯಲಾದ ಖಾತೆಯು ಏಕವ್ಯಕ್ತಿ ಪ್ರಕಾರದ ಖಾತೆಯಾಗಿರುತ್ತದೆ ಮತ್ತು ಖಾತೆಯನ್ನು ಪೋಸ್ಟ್ ಆಫೀಸ್ ಅಥವಾ ಯಾವುದೇ ಅಧಿಕೃತ ಬ್ಯಾಂಕ್‌ನಲ್ಲಿ ತೆರೆಯಬಹುದಾಗಿದೆ ಸರ್ಕಾರಿ ಗೆಜೆಟ್ ಅಧಿಸೂಚನೆಯ ಪ್ರಕಾರ […]

ಭಾರತೀಯ ಅಂಚೆ ಇಲಾಖೆ ಸಿಬ್ಬಂದಿಗಳಿಗೆ ತರಬೇತಿ ಶಿಬಿರ ಸಮಾರೋಪ ಸಮಾರಂಭ

ಉಡುಪಿ: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ಸುಮಾರು ತನ್ನ ನೌಕರರಿಗಾಗಿ 750 ಮಿಕ್ಕಿ ನೌಕರರಿಗೆ ಕೇಂದ್ರ ಸರಕಾರದ ಇಲಾಖೆಯ ಹೊಸ ಯೋಜನೆಯ ಬಗ್ಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಗುರುವಾರದಂದು ನಡೆಯಿತು. ಉಡುಪಿ ಅಂಚೆವಿಭಾಗದ ಅಧೀಕ್ಷಕ ನವೀನ್ ಚಂದರ್ ಮೂಳೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಇಲಾಖೆಯ ಜಿ. ಡಿ. ‌ಕೆ ರಿಫ್ರಶರ್ ಮತ್ತು ಪಾರ್ಸೆಲ್ ಡಿ.ಇ.ಪಿ ಹಾಗೂ ಡಾಕ್ ಕರ್ಮಯೋಗಿ ಪೋರ್ಟಲ್ ಅಡಿಯಲ್ಲಿ ತರಬೇತಿ ನೀಡಲಾಗಿದೆ. ಈ ತರಬೇತಿಯು ಮುಖ್ಯವಾಗಿದ್ದು, […]

ಅವಿಭಜಿತ ದ.ಕ ಜಿಲ್ಲೆಯಲ್ಲಿ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು/ಉಡುಪಿ: ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹತ್ತನೇ ತರಗತಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ. ಅರ್ಜಿಗಳನ್ನು https://indiapostgdsonline.gov.in ಗೆ ಫೆಬ್ರವರಿ 16 ರೊಳಗೆ ಸಲ್ಲಿಸಬೇಕು. ಅಭ್ಯರ್ಥಿಯ ವಯಸ್ಸು 18 ರಿಂದ 40 ವಯೋಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ https://indiapost.gov.in ಗೆ ಲಾಗಿನ್ ಆಗಬಹುದು.