ಸರ್ಕಲ್ ಮಟ್ಟದ ಅಂಚೆ ಚೀಟಿ ವಿನ್ಯಾಸ ಸ್ಪರ್ಧೆ: ಕು.ದೀಪಿಕಾ ಭಟ್ಟ್ ಗೆ ಪ್ರಮಾಣ ಪತ್ರ

ಉಡುಪಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಲ್ ಮಟ್ಟದ ಅಂಚೆ ಚೀಟಿ ವಿನ್ಯಾಸದ ಸ್ವರ್ಧೆಯಲ್ಲಿ ವಿಜೇತಳಾದ ಕು.ದೀಪಿಕಾ ಭಟ್ಟ್ ಗೆ ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಸುರೇಶ್ ಗುಪ್ತಾ ಇವರು ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ಅಂಚೆ ಅಧೀಕ್ಷಕ ನವೀನ್ ಚಂದರ್ ಮೂಳೂರು ಮತ್ತು ಉಡುಪಿ ಪ್ರಧಾನ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಗುರು ಪ್ರಸಾದ್ ಉಪಸ್ಥಿತರಿದ್ದರು.

ಡಿ.7 ರಂದು  ಪಿಂಚಣಿ ಮತ್ತು ತ್ರೈಮಾಸಿಕ ಅಂಚೆ ಅದಾಲತ್ 

ಉಡುಪಿ: ಅಂಚೆ ಇಲಾಖೆ ವತಿಯಿಂದ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಪಿಂಚಣಿ ಅದಾಲತ್ ಮತ್ತು 11 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿ.5 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಅಂಚೆ ವಿಭಾಗದ ವತಿಯಿಂದ ಸೆ. 15 ರಂದು ಸುಕನ್ಯಾ ಸಮೃದ್ಧಿ ಮಹೋತ್ಸವ

ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ಸೆಪ್ಟಂಬರ್ 15 ರಂದು ಸಂಜೆ 4 ಗಂಟೆಗೆ ನಗರದ ಮಿಷನ್ ಆಸ್ಪತ್ರೆಯ ಮಾರ್ಗದಲ್ಲಿರುವ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಬಡಗಬೆಟ್ಟು ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ವಿವಿಧ […]

ಭಾರತೀಯ ಅಂಚೆ ಇಲಾಖೆ: ಸಹೋದರರಿಗೆ ಹಾಗೂ ಸೇನಾ ಯೋಧರಿಗೆ ಆನ್ ಲೈನ್ ರಾಖಿ ತಲುಪಿಸುವ ಅವಕಾಶ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಮನೆಯಲ್ಲಿ ಕುಳಿತು ದೇಶದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕೇವಲ 120 ರೂ. ವೆಚ್ಚದಲ್ಲಿ ಸಹೋದರರಿಗೆ ಹಾಗೂ ಲಡಾಕ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಈ ಸೇವಾ ಯೋಜನೆಯಲ್ಲಿ www.karnatakapost.gov.in/Rakhi_Post ಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಿದಾಗ ಏಳು ವಿಧದ ಆಕರ್ಷಕ ವಿನ್ಯಾಸವುಳ್ಳ ರಾಖಿಗಳನ್ನು ವೀಕ್ಷಿಸಬಹುದಾಗಿದ್ದು, ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸ ಅಂಕಿ ನಮೂದಿಸಿದ್ದು […]

ಭಾರತೀಯ ಅಂಚೆ ಇಲಾಖೆಯ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ 18 ವರ್ಷ ಮೇಲ್ಪಟ್ಟವರಿಗೆ, ‘ವಿಶನ್ ಫಾರ್ ಇಂಡಿಯಾ 2047’ ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಅಂತರ್ದೇಶೀಯ ಪತ್ರದಲ್ಲಿ ಬರೆದ ಕೈಬರಹದ ಪ್ರತಿಯನ್ನು ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.indiapost.gov.in, www.karnatakapost.gov.in ಅಥವಾ ದೂರವಾಣಿ ಸಂಖ್ಯೆ: 0820-2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ […]