ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್: ಲಾರ್ಡ್ಸ್ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು
ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಅಂತಿಮ ದಿನದಾಟದಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ, ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿತ್ತು.