ಇತಿಹಾಸದಲ್ಲಿ ಮೊದಲ ಬಾರಿ ಇಸ್ರೇಲಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ: ಎಸ್ ಜೈಶಂಕರ್

ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷವು ಯುಗಗಳಿಂದಲೂ ನಡೆಯುತ್ತಿದೆ. ನಮಗೆ ಕೆಲವು ರಾಜಕೀಯ ಕಾರಣಗಳಿವೆ, ಇದರಿಂದಾಗಿ ನಾವು ಇಸ್ರೇಲ್ ಜೊತೆಗಿನ ನಮ್ಮ ಸಂಬಂಧವನ್ನು ಮುಂದುವರಿಸಲಿಲ್ಲ. ನಾವು ನಮ್ಮನ್ನು ನಿರ್ಬಂಧಿಸಿದ್ದೇವೆ. ಭಾರತದ ಇತಿಹಾಸದಲ್ಲಿ ಇಸ್ರೇಲ್‌ಗೆ ಭೇಟಿ ನೀಡಿದ ಮೊದಲ ಪ್ರಧಾನಿ ಮೋದಿ. ನಾವು ಬಾಂಧವ್ಯದಿಂದ ಪ್ರಯೋಜನ ಪಡೆಯಬಹುದೆಂದು ಇಡೀ ದೇಶಕ್ಕೆ ತಿಳಿದಿದೆ. ಒಮ್ಮೆ ನೀವು ವೋಟ್ ಬ್ಯಾಂಕ್ ರಾಜಕೀಯದಿಂದ ಹೊರಬಂದರೆ, ಅದು ನಿಮ್ಮ ವಿದೇಶಾಂಗ ನೀತಿಗಳ ಮೇಲೆ ಸಹ ಪರಿಣಾಮ ಬೀರುತ್ತದೆ. ವೋಟ್ ಬ್ಯಾಂಕ್ ರಾಜಕೀಯವು ರಾಷ್ಟ್ರೀಯ […]

ಏಷ್ಯಾಕಪ್ ಟಿ20: ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಭಾರತ

ನಿನ್ನೆ ರಾತ್ರಿ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟ್ವೆಂಟಿ-20 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ 19.5 ಓವರ್ ಗಳಲ್ಲಿ147 ರನ್‌ಗಳಿಗೆ ಆಲೌಟ್ ಆಯಿತು, ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ 43 ರನ್‌ಗಳು ತಂಡದ ಗರಿಷ್ಠ ಸ್ಕೋರ್ ಆಗಿದ್ದವು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮೂರು ಮತ್ತು ಅರ್ಷದೀಪ್ ಸಿಂಗ್ […]

ಮುಂದಿನ 6 ತಿಂಗಳಲ್ಲಿ ಇ-ಪಾಸ್‌ಪೋರ್ಟ್ ಸೇವೆ ಆರಂಭ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ

ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಎಲೆಕ್ಟ್ರಾನಿಕ್-ಪಾಸ್‌ಪೋರ್ಟ್‌ಗಳನ್ನು ಹೊರತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಡಾ. ಔಸಫ್ ಸಯೀದ್ ಅವರು ಹೈದರಾಬಾದ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪಾಸ್‌ಪೋರ್ಟ್ ಪುಸ್ತಕಕ್ಕೆ ಇ-ಚಿಪ್ ಮತ್ತು ಇನ್ನೂ ಕೆಲವು ವೈಶಿಷ್ಟ್ಯಗಳನ್ನು ಸೇರಿಸಲಾಗುವುದು, ಈ ವ್ಯವಸ್ಥೆ ಭಾರತೀಯ ಪಾಸ್‌ಪೋರ್ಟ್‌ಗೆ ಭದ್ರತಾ ನವೀಕರಣವನ್ನು ಒದಗಿಸುತ್ತದೆ ಮತ್ತು ಯಂತ್ರದ ಮೂಲಕ ಓದುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ‘ವಿದೇಶ ಸಂಪರ್ಕ’ ಕಾರ್ಯಕ್ರಮದ ಭಾಗವಾಗಿ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡವು ಹೈದರಾಬಾದ್‌ಗೆ […]

ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ : ಏಷ್ಯಾ ಕಪ್ 2022 ಗೂ ಮುನ್ನ ಭಾರತಕ್ಕೆ ಆಘಾತ

ನವದೆಹಲಿ: ದುಬೈನಲ್ಲಿ ಪಾಕಿಸ್ತಾನ ವಿರುದ್ಧದ ಭಾರತದ ಬಹುನಿರೀಕ್ಷಿತ ಆರಂಭಿಕ ಪಂದ್ಯಕ್ಕೂ ಕೆಲವು ದಿನಗಳ ಮೊದಲೆ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ -19 ದೃಢಪಟ್ಟಿದೆ. ಕೋಚ್ ರಾಹುಲ್ ದ್ರಾವಿಡ್ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರಿಂದ ಅವರು ತಂಡದ ಜೊತೆ ದುಬೈಗೆ ತೆರಳುವುದು ಸಾಧ್ಯವಿಲ್ಲ. ಇದರಿಂದ ಏಷ್ಯಾ ಕಪ್ 2022 ಗೂ ಮುನ್ನವೆ ಭಾರತವು ದೊಡ್ಡ ಆಘಾತವನ್ನು ಅನುಭವಿಸಿದೆ. ಟಿ20 ವಿಶ್ವಕಪ್‌ಗೆ ಮುನ್ನ ಯುಎಇಗೆ ತೆರಳಿ ಕಾಂಟಿನೆಂಟಲ್ ಪಂದ್ಯಾವಳಿಯನ್ನು ಆಡಲಿರುವ ಭಾರತ […]

22ನೇ ಕಾಮನ್‌ವೆಲ್ತ್ ಗೇಮ್ಸ್‌ ಗೆ ವಿದಾಯ: 22 ಚಿನ್ನ ಸೇರಿದಂತೆ 61 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ

ಬರ್ಮಿಂಗ್‌ಹ್ಯಾಮ್‌: ಇಲ್ಲಿನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಕಾಮನ್‌ವೆಲ್ತ್ ಗೇಮ್ಸ್ 2022 ಸೋಮವಾರ ರಾತ್ರಿ ಅದ್ದೂರಿ ಸಮಾರೋಪ ಸಮಾರಂಭದೊಂದಿಗೆ ಕೊನೆಗೊಂಡಿತು. 72 ರಾಷ್ಟ್ರಗಳು ಮತ್ತು ಪ್ರಾಂತ್ಯಗಳಿಂದ 5,000 ಕ್ಕೂ ಹೆಚ್ಚು ಕ್ರೀಡಾಪಟುಗಳು ಸ್ಪರ್ಧಿಸಿದ ಹನ್ನೊಂದು ದಿನಗಳ ಕ್ರೀಡಾ ಚಟುವಟಿಕೆಗಳ ನಂತರ ಆಟಗಳು ಅಧಿಕೃತವಾಗಿ ಮುಕ್ತಾಯಗೊಂಡವು. ಸಮಾರೋಪ ಸಮಾರಂಭದಲ್ಲಿ ಬಾಕ್ಸರ್ ನಿಖತ್ ಝರೀನ್ ಮತ್ತು ಟೇಬಲ್ ಟೆನಿಸ್ ಆಟಗಾರ ಅಚಂತಾ ಶರತ್ ಕಮಲ್ ಅವರು ರಾಷ್ಟ್ರಧ್ವಜದೊಂದಿಗೆ ಭಾರತ ತಂಡವನ್ನು ಮುನ್ನಡೆಸಿದರು. 2026 ರಲ್ಲಿ ಕ್ರೀಡಾಕೂಟದ ಮುಂದಿನ ಆವೃತ್ತಿಯನ್ನು ಆಯೋಜಿಸಲಿರುವ ಆಸ್ಟ್ರೇಲಿಯಾದ ವಿಕ್ಟೋರಿಯಾ […]