ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್: ದಕ್ಷಿಣ ಕೊರಿಯಾವನ್ನು ಸೋಲಿಸಿ ಕಪ್ ಗೆದ್ದ ಭಾರತ

ಟೋಕಿಯೋ: ಜಪಾನ್‌ನಲ್ಲಿ ನಡೆದ 2023 ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ನಲ್ಲಿ ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿ ಭಾರತವು ಇದೇ ಮೊದಲ ಬಾರಿಗೆ ಕಪ್ ಗೆದ್ದುಕೊಂಡಿದೆ. ಜಪಾನಿನ ಗಿಫು ಪ್ರಾಂತ್ಯದ ಕಕಮಿಗಹರಾದಲ್ಲಿ ನಡೆದ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ -2023 ರಲ್ಲಿ ತನ್ನ ಅಮೋಘ ಪ್ರದರ್ಶನವನ್ನು ತೋರಿದ ಭಾರತೀಯ ಕ್ರೀಡಾಳುಗಳು ಕಪ್ ಗೆದ್ದಿದ್ದಾರೆ. ಇದಕ್ಕಾಗಿ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಸಹಾಯಕ ಸಿಬ್ಬಂದಿಗೆ ತಲಾ 1 […]

71ನೇ ವಿಶ್ವ ಸುಂದರಿ ಸ್ಪರ್ಧೆಯ ಆತಿಥೇಯ ಪ್ರತಿನಿಧಿಯಾಗಿ ಜಗತ್ತನ್ನು ಸ್ವಾಗತಿಸಲಿದ್ದಾರೆ ಸಿನಿಶೆಟ್ಟಿ

ನವದೆಹಲಿ: ಬರೋಬ್ಬರಿ 27 ವರ್ಷಗಳ ಬಳಿಕ 71ನೇ ವಿಶ್ವ ಸುಂದರಿ ಸ್ಪರ್ಧೆಯು ಭಾರತದಲ್ಲಿ ನಡೆಯಲಿದ್ದು, ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ವಿಜೇತೆ ಸಿನಿಶೆಟ್ಟಿ ಆತಿಥೇಯ ಪ್ರತಿನಿಧಿಯಾಗಿದ್ದು ಈ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಈ ಘಳಿಗೆಗೋಸ್ಕರ ತುಂಬಾ ಸಮಯದಿಂದ ಕಾಯುತ್ತಿದ್ದೆ, ನಾನು ಆತಿಥೇಯ ಪ್ರತಿನಿಧಿಯಾಗಿದ್ದು ಜಗತ್ತಿನ ಎಲ್ಲಾ ದೇಶಗಳನ್ನು ಭಾರತಕ್ಕೆ ಸ್ವಾಗತಿಸಲು, ಭಾರತದ ಸಂಸ್ಕೃತಿ, ಆಚಾರ ವಿಚಾರ ಹಾಗೂ ಆಹಾರದ ಪರಿಚಯವನ್ನು ಜಗತ್ತಿಗೆ ಪರಿಚಯಿಸಲು ತುಂಬಾ ಉತ್ಸುಕಳಾಗಿದ್ದೇನೆ ಎಂದು ಸುದ್ದಿಸಂಸ್ಥೆ ಎ.ಎನ್.ಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. […]

ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]

ಭಾರತ-ಪಾಕ್ ನಿಯಂತ್ರಣ ರೇಖೆಯ ತೀತ್ವಾಲ್ ನಲ್ಲಿ ತಾಯಿ ಶಾರದಾಂಬೆಗೆ ಪ್ರಾಣ ಪ್ರತಿಷ್ಠೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಕ್ತರು

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ತೀತ್ವಾಲ್‌ ನಲ್ಲಿ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಜೂ.5ರಂದು ಶ್ರೀ ಶಾರದಾಂಬೆ ವಿಗ್ರಹವನ್ನು ವೇದ ಮಂತ್ರ ಘೋಷಗಳೊಂದಿಗೆ ವಿಧಿವತ್ತಾಗಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನಡೆಸಿದರು. ಕಳೆದ ಮಾ.22ರಂದು ಕಾಶ್ಮೀರಿ ಪಂಡಿತರು ಶೃಂಗೇರಿಯಿಂದ ಕೊಂಡೊಯ್ದ ಪಂಚಲೋಹದ ವಿಗ್ರಹವನ್ನು ಜಮ್ಮು ಮತ್ತು ಕಾಶ್ಮೀರದ ತೀತ್ವಾಲ್‌ನಲ್ಲಿ ಪ್ರತಿಷ್ಠಾಪಿಸಿದ್ದರು. ಇದೀಗ ಶ್ರೀ ಶಾರದಾ ಪೀಠದ ಜಗದ್ಗುರುಗಳು ಕಾಶ್ಮೀರದ ತೀತ್ವಾಲ್ ಗೆ ತೆರಳಿ ಪೂಜೆ ಸಲ್ಲಿಸಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದಾರೆ. ಭಾರತ-ಪಾಕಿಸ್ಥಾನ ನಿಯಂತ್ರಣ ರೇಖೆಯ ಕುಪ್ವಾರ […]

ಮನ್ನಾರ್ ಕೊಲ್ಲಿಯಲ್ಲಿ 20 ಕೋಟಿ ರೂ. ಮೌಲ್ಯದ 33 ಕೆಜಿ ಚಿನ್ನ ವಶ: ಭಾರತೀಯ ಕೋಸ್ಟ್ ಗಾರ್ಡ್- ಕಂದಾಯ- ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ

ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಕಂದಾಯ- ಗುಪ್ತಚರ ನಿರ್ದೇಶನಾಲಯ ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನ್ನಾರ್ ಕೊಲ್ಲಿ ಪ್ರದೇಶದಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ ಸುಮಾರು ₹20.2 ಕೋಟಿ ಮೌಲ್ಯದ 32.6 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಚಿನ್ನವು ಶ್ರೀಲಂಕಾದಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿತ್ತು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಾರತೀಯ ಕೋಸ್ಟ್ ಗಾರ್ಡ್‌ನ ಡೆಪ್ಯುಟಿ ಡೈರೆಕ್ಟರ್ ಜನರಲ್ (ಕಾರ್ಯಾಚರಣೆ) ಆಗಿರುವ ಇನ್ಸ್‌ಪೆಕ್ಟರ್ ಜನರಲ್ ಮನೀಶ್ ಪಾಠಕ್ ಮಾಹಿತಿ ನೀಡಿ, “ಡಿಆರ್‌ಐನಿಂದ ನಿರ್ದಿಷ್ಟ ಮಾಹಿತಿಯ ಆಧಾರದ […]