142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ: ವಿಶ್ವಸಂಸ್ಥೆ

ಹೊಸದಿಲ್ಲಿ: ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಯುಎನ್ ಅಂದಾಜಿನ ಪ್ರಕಾರ, ಚೀನಾದ 142.57 ಕೋಟಿಯ ವಿರುದ್ಧ ಭಾರತದ ಜನಸಂಖ್ಯೆ 142.86 ಕೋಟಿ ತಲುಪಿದೆ ಎಂದು ಅದು ಹೇಳಿದೆ. ವಿಶ್ವಸಂಸ್ಥೆಯು 1950 ರಲ್ಲಿ ಜನಸಂಖ್ಯೆಯ ಅಂಕಿಅಂಶಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ ನಂತರ ಭಾರತವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವುದು ಇದೇ ಮೊದಲು. ಚೀನಾವು ಕೆಲವು ಸಮಯದಿಂದ ಜನಸಂಖ್ಯಾ […]

ಗಡಿಯಲ್ಲಿ ಚೀನಾ ದಾರ್ಷ್ಟ್ಯ ಪ್ರದರ್ಶನ: ಮೊತ್ತೊಮ್ಮೆ ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ

ಗುವಾಹಟಿ: ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಮತ್ತೊಮ್ಮೆ ಒತ್ತಿಹೇಳುವ ಪ್ರಯತ್ನದ ಭಾಗವಾಗಿ ಚೀನಾವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಹೊಸ ಹೆಸರುಗಳನ್ನು ಬಿಡುಗಡೆ ಮಾಡಿದೆ. ಇದೀಗ ಮೂರನೇ ಬಾರಿಗೆ ಚೀನಾವು ಅರುಣಾಚಲ ಪ್ರದೇಶದ ಸ್ಥಳಗಳಿಗೆ ‘ಮರುನಾಮಕರಣ’ ಮಾಡಿದ್ದು, ಅದನ್ನು “ಜಂಗ್ನಾನ್, ಟಿಬೆಟ್‌ನ ದಕ್ಷಿಣ ಭಾಗ” ಎಂದು ಕರೆದಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ನಿನ್ನೆ ಚೀನಾದ ಕ್ಯಾಬಿನೆಟ್, ಸ್ಟೇಟ್ ಕೌನ್ಸಿಲ್ ನೀಡಿದ ಭೌಗೋಳಿಕ ಹೆಸರುಗಳ ಮೇಲಿನ ನಿಯಮಗಳಿಗೆ ಅನುಸಾರವಾಗಿ ಚೀನಾ, ಟಿಬೆಟ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ […]

ಜೂಲಿ-ರೋಮಿಯೋ-ಹನಿ-ರಾಂಬೊ: ಟರ್ಕಿಯಲ್ಲಿ ಭಾರತೀಯ ಶ್ವಾನದಳದ ನಾಲ್ಕು ಹೀರೋಗಳು

ಸೈಪ್ರಸ್: ಫೆಬ್ರವರಿ 6 ರಂದು ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪನದ ನಂತರ, 5,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ವಿಶ್ವದ ಬಹುತೇಕ ದೇಶಗಳು ಟರ್ಕಿಗೆ ಸಹಾಯ ಹಸ್ತ್ ಚಾಚಿವೆ. ಭಾರತವೂ ಕೂಡಾ ಶ್ವಾನದಳ ಮತ್ತು 101 ಸದಸ್ಯರ ಎನ್.ಡಿ.ಆರ್.ಎಫ್ ತಂಡವನ್ನು ಕಳುಹಿಸಿದ್ದು, ತಂಡವು ಅದಾಗಲೇ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಮಧ್ಯೆ ಶ್ವಾನದಳದಲ್ಲಿ ಜೂಲಿ, ರೋಮಿಯೋ, ಹನಿ ಮತ್ತು ರಾಂಬೊ ಎನ್ನುವ ನಾಲ್ಕು ಶ್ವಾನಗಳು ರಕ್ಷಣಾ ಕಾರ್ಯಾಚರಣೆಯ ಭಾಗವಾಗಿವೆ. ಈ ಲ್ಯಾಬ್ರಡಾರ್ ತಳಿಯ […]

ಭೂಕಂಪ ಸಂತ್ರಸ್ತ ಟರ್ಕಿಗೆ ಭಾರತದ ಸಹಾಯಹಸ್ತ: ಶ್ವಾನದಳದೊಂದಿಗೆ ಎನ್.ಡಿ. ಆರ್.ಎಫ್ ತಂಡದಿಂದ ರಕ್ಷಣಾ ಕಾರ್ಯ

ಸೈಪ್ರಸ್: ಟರ್ಕಿಯಲ್ಲಿ ನಿನ್ನೆ 7.8, 7.6 ಮತ್ತು 6.0 ತೀವ್ರತೆಯ ಸತತ ಮೂರು ವಿನಾಶಕಾರಿ ಭೂಕಂಪಗಳಿಂದ 3,400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. ಕಟ್ಟಡಗಳು ತರಗೆಲೆಗಳಂತೆ ಉದುರಿದ್ದು, ಈ ಕಟ್ಟಡಗಳ ಅವಶೇಷಗಳಡಿಯಲ್ಲಿ ಅದೆಷ್ಟು ಜನ ರಕ್ಷಣೆಗಾಗಿ ಕಾಯುತ್ತಿದ್ದಾರೆ ಎನ್ನುವ ಲೆಕ್ಕವೇ ಇಲ್ಲ. ಇದೀಗ, ವಿಶೇಷ ತರಬೇತಿ ಪಡೆದ ಶ್ವಾನದಳದೊಂದಿಗೆ ಭಾರತದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ತಂಡವು ಅಗತ್ಯ ಸಲಕರಣೆಗಳೊಂದಿಗೆ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗಾಗಿ ಟರ್ಕಿಗೆ ತೆರಳಿದೆ. ಟರ್ಕಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು […]

ಮತ್ತೊಮ್ಮೆ ಶತಕ ಪೇರಿಸಿದ ಶುಭಮನ್ ಗಿಲ್: ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಗಿಲ್ ಕಮಾಲ್

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಶತಕ ಸಿಡಿಸಿದ್ದಾರೆ. ಇತ್ತೀಚೆಗಷ್ಟೇ ದ್ವಿಶತಕ ಬಾರಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ ಗಿಲ್ ಮತ್ತೊಂದು ಶತಕ ಬಾರಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಶುಭಮನ್ ಗಿಲ್ 72 ಎಸೆತಗಳಲ್ಲಿ 100 ರನ್ ಪೂರೈಸಿದರು. ಮೂರನೇ ಏಕದಿನ ಪಂದ್ಯದಲ್ಲಿ ಅವರ ಒಟ್ಟು ಸ್ಕೋರ್ 78 ಎಸೆತಗಳಲ್ಲಿ 112 ರನ್ ಆಗಿತ್ತು. ಈ ವೇಳೆ ಅವರು 5 ಸಿಕ್ಸರ್ ಮತ್ತು 13 ಬೌಂಡರಿಗಳನ್ನು […]