ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ : ಸಿಯಾಚಿನ್ನಲ್ಲಿ ಅಗ್ನಿವೀರ್ ಅಕ್ಷಯ್ ಹುತಾತ್ಮ
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಸಿಯಾಚಿನ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ‘ಅಗ್ನಿವೀರ್’ ಗವಟೆ ಅಕ್ಷಯ್ ಲಕ್ಷ್ಮಣ್ ಎಂಬುವರು ಹುತಾತ್ಮರಾಗಿದ್ದಾರೆ. ಸಿಯಾಚಿನ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಹಾರಾಷ್ಟ್ರದ ಮೂಲದ ಅಗ್ನಿವೀರ್ ಗವಟೆ ಅಕ್ಷಯ್ ಲಕ್ಷ್ಮಣ್ ಹುತಾತ್ಮರಾಗಿದ್ದಾರೆ. ಇವರು ಸೇನಾ ಕಾರ್ಯಾಚರಣೆಯಲ್ಲಿ ಪ್ರಾಣವನ್ನು ತ್ಯಾಗ ಮಾಡಿದ ಮೊದಲ ಅಗ್ನಿವೀರ್ ಆಗಿದ್ದು, ಭಾರತೀಯ ಸೇನೆಯು ಭಾನುವಾರ ಅಂತಿಮ ಗೌರವ ಸಲ್ಲಿಸಿದೆ. ಸಿಯಾಚಿನ್ ಹಿಮನದಿಯನ್ನು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಎಂದು ಕರೆಯಲಾಗುತ್ತದೆ. ಅಲ್ಲದೇ, ಇದು ಭಾರತದ ಅತಿದೊಡ್ಡ ಹಾಗೂ ವಿಶ್ವದ ಎರಡನೇ ಅತಿದೊಡ್ಡ ಹಿಮನದಿಯಾಗಿದೆ. […]