ಜಮ್ಮು ಕಾಶ್ಮೀರದ 35A ವಿಧಿಯು ಇತರ ನಾಗರಿಕರನ್ನು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ: ಜ. ಚಂದ್ರಚೂಡ್

ಹೊಸದಿಲ್ಲಿ: ಸಂವಿಧಾನದ 35A ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. “ಸಮಾನತೆಯ ಅವಕಾಶ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು -ಈ ವಿಧಿಯು ನಾಗರಿಕರಿಂದ ಇವೆಲ್ಲವನ್ನೂ ಕಸಿದುಕೊಳ್ಳುತ್ತದೆ. ಏಕೆಂದರೆ ನಿವಾಸಿಗಳು (ಜಮ್ಮು ಮತ್ತು ಕಾಶ್ಮೀರದ) ವಿಶೇಷ ಹಕ್ಕುಗಳನ್ನು ಹೊಂದಿದ್ದರಿಂದ, ಅನಿವಾಸಿಗಳನ್ನು ಹೊರಗಿಡಲಾಗಿತ್ತು” ಎಂದು ಅವರು ಹೇಳಿದ್ದಾರೆ. ಭಾರತೀಯ ಸಂವಿಧಾನವು “ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತ ಉನ್ನತ […]

ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್‌ಸಿ ಮಹದೇವಪ್ಪ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]

ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ: ವಿರೋಧಪಕ್ಷಗಳಿಂದ ಪ್ರತಿಭಟನೆ

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಶುಕ್ರವಾರ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದರು. ವಿರೋಧ ಪಕ್ಷದ ಸದಸ್ಯರು ಈ ಕ್ರಮವನ್ನು ವಿರೋಧಿಸಿರು ಮತ್ತು ಪ್ರಸ್ತಾವಿತ ಮಸೂದೆಗೆ ಮತದಾನ ನಡೆಸುವಂತೆ ಕೇಳಿಕೊಂಡರು. ವೈಯಕ್ತಿಕ ಕಾನೂನುಗಳನ್ನು ರದ್ದುಪಡಿಸುವ ಮೂಲಕ, ಏಕರೂಪ ನಾಗರಿಕ ಸಂಹಿತೆಯು ಮದುವೆ, ದತ್ತು, ಪಿತ್ರಾರ್ಜಿತ, ಉತ್ತರಾಧಿಕಾರ ಮತ್ತು ವಿಚ್ಛೇದನದವರೆಗಿನ ಎಲ್ಲ ವಿಷಯಗಳ ಮೇಲೆ ಸಾಮಾನ್ಯ ಕಾನೂನುಗಳ ನಿಯಮಗಳೊಂದಿಗೆ ಯಾವುದೇ ಸಮುದಾಯಗಳನ್ನು ಲೆಕ್ಕಿಸದೆ ದೇಶದ ನಾಗರಿಕರನ್ನು ಸಮಾನವಾಗಿ […]

ದೇಶದಲ್ಲಿ ಒಂದಲ್ಲ ಒಂದು ದಿನ ಏಕರೂಪ ನಾಗರಿಕ ಸಂಹಿತೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಕೊಪ್ಪಳ: ಏಕರೂಪ ನಾಗರಿಕ ಸಂಹಿತೆ ಒಂದಲ್ಲ ಒಂದು ದಿನ ದೇಶದಲ್ಲಿ ಜಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆ ತರಲು ಬಿಜೆಪಿ ಬದ್ಧವಾಗಿದೆ ಮತ್ತು ಅದನ್ನು ಜಾರಿಗೆ ತರಲು ಹೊರಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಬಿಜೆಪಿ”. ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದ ಅವರು, “ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂಬುದು ಪಕ್ಷದ ನಿಲುವು ಪ್ರಸ್ತುತ ಯಾವುದೇ ಕೋಮು […]