ಭಾರತೀಯ ಸೇನೆಯನ್ನು ಸೇರಿಕೊಂಡ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ತಯಾರಿಸಿದ ಪ್ರಪ್ರಥಮ ಶಸ್ತ್ರಸಜ್ಜಿತ ಲಘು ವಿಶೇಷ ವಾಹನ: ಆರ್ಮಡೋ
ಹೊಸದಿಲ್ಲಿ: ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ (MDS) ಭಾರತೀಯ ಸಶಸ್ತ್ರ ಪಡೆಗಳಿಗಾಗಿ ವಿಶೇಷವಾಗಿ ನಿರ್ಮಿಸಲಾದ ಭಾರತದ ಪ್ರಪ್ರಥಮ ಆರ್ಮರ್ಡ್ ಲೈಟ್ ಸ್ಪೆಷಲಿಸ್ಟ್ ವೆಹಿಕಲ್ (ALSV) ‘ಆರ್ಮಡೋ’ ವಿತರಣೆಯನ್ನು ಪ್ರಾರಂಭಿಸಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಘೋಷಿಸಿದ್ದಾರೆ. MDS ಮಹೀಂದ್ರಾ ಗ್ರೂಪ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಹೊಸ ವಾಹನವನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಮತ್ತು ತಯಾರಿಸಲಾಗಿದೆ ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿ ತಿಳಿಸಿದ್ದಾರೆ. ಆರ್ಮಡೊ ಒಂದು ಲಘು ಶಸ್ತ್ರಸಜ್ಜಿತ ವಿಶೇಷ ವಾಹನವಾಗಿದ್ದು, ರಕ್ಷಣಾ ಪಡೆಗಳ ಬಳಕೆಗಾಗಿ ನಿರ್ಮಿಸಲಾಗಿದೆ. […]
ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಮುಂದಿನ ಸಿಡಿಎಸ್
ನವದೆಹಲಿ: ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಮುಂದಿನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ನೇಮಿಸಲಾಗಿದೆ ಎಂದು ಭಾರತ ಸರ್ಕಾರ ಬುಧವಾರ ತಿಳಿಸಿದೆ. ಅವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. ಡಿಸೆಂಬರ್ 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಮರಣದ ಒಂಬತ್ತು ತಿಂಗಳ ನಂತರ ಚೌಹಾಣ್ ಅವರನ್ನು ಸಿಡಿಎಸ್ ಆಗಿ ನೇಮಿಸಲಾಗಿದೆ. ಚೌಹಾಣ್ ರವರು ನ್ಯಾಷನಲ್ […]
ಅಗ್ನಿಪಥ್ ಯೋಜನೆ ಎಂದರೇನು? ಅಗ್ನಿವೀರರಾಗಲು ಬೇಕಾಗುವ ಅರ್ಹತೆ ಮತ್ತು ಮಾನದಂಡಗಳೇನು? ಮಾಹಿತಿ ಇಲ್ಲಿದೆ
ಭಾರತೀಯ ಸೇನೆಯ ಮೂರು ಸೇವೆಗಳಲ್ಲಿ ಸೈನಿಕರನ್ನು ನೇಮಿಸಿಕೊಳ್ಳಲು ಸರ್ಕಾರ ಹೊಸ ಅಗ್ನಿಪಥ್ ಯೋಜನೆಯನ್ನು ಮಂಗಳವಾರ ಅನಾವರಣಗೊಳಿಸಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯಿಂದ ಅನುಮತಿ ಪಡೆದಿರುವ ಹೊಸ ರಕ್ಷಣಾ ನೇಮಕಾತಿ ಸುಧಾರಣೆಯು ತಕ್ಷಣವೇ ಜಾರಿಗೆ ಬರಲಿದ್ದು, ಯೋಜನೆಯಡಿಯಲ್ಲಿ ನೇಮಕಗೊಂಡ ಸೈನಿಕರನ್ನು ‘ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಹೊಸ ವ್ಯವಸ್ಥೆಯು ಅಧಿಕಾರಿ ಶ್ರೇಣಿಗಿಂತ ಕೆಳಗಿನ ಸಿಬ್ಬಂದಿಗೆ ಮಾತ್ರ. 1. ಹೊಸ ಯೋಜನೆಯಡಿ, ವಾರ್ಷಿಕವಾಗಿ ಸುಮಾರು 45,000 ರಿಂದ 50,000 ಸೈನಿಕರನ್ನು ನೇಮಿಸಿಕೊಳ್ಳಲಾಗುವುದು ಮತ್ತು ಹೆಚ್ಚಿನವರು ಕೇವಲ ನಾಲ್ಕು ವರ್ಷಗಳಲ್ಲಿ ಸೇವೆಯನ್ನು ತೊರೆಯುತ್ತಾರೆ. […]