ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಕುರಿತು ಒಂದು ದಿನದ ಕಾರ್ಯಾಗಾರ

ಉಡುಪಿ: ಭಾರತೀಯ ಮನೋವೈದ್ಯರ ಸಂಘ ಕರ್ನಾಟಕ ಶಾಖೆ, ಉಡುಪಿ ಹಾಗೂ ಮಂಗಳೂರು ಮನೋವೈದ್ಯರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಆತ್ಮಹತ್ಯೆಯನ್ನು ಅರ್ಥೈಸುವಿಕೆ, ಆತ್ಮಹತ್ಯಾ ವರದಿಗಾರಿಕೆ ಮತ್ತು ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಪತ್ರಕರ್ತರ ಪಾತ್ರದ ಕುರಿತು ಒಂದು ದಿನದ ಕಾರ್ಯಾಗಾರವು ಸೆ.9 ರಂದು ನಗರದ ಐ.ಎಮ್.ಎ ಭವನದಲ್ಲಿ ಜರುಗಿತು. ಭಾರತೀಯ ಭಾರತೀಯ ಮನೋವೈದ್ಯರ ಸಂಘದ ಅಧ್ಯಕ್ಷ ಡಾ.ಪಿ.ಕೆ ಕಿರಣ್ ಕುಮಾರ್ ಮುಖ್ಯ ಅಥಿತಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.     […]