ಹೆಣ್ಣೆಂದರೆ ಬರೀ ಹೆಣ್ಣಲ್ಲ ಬಾಳ ಬೆಳಗೋ ಕಣ್ಣು: ಜಹಫರ್ ಸಾಧಿಕ್ ಬರೆದ ಓದಲೇಬೇಕಾದ ಬರಹ
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಸ್ತೀ ಗೆ ಅವಳದೇ ಆದ ಗೌರವ ಸ್ಥಾನಮಾನಗಳಿವೆ. ಹೆಣ್ಣು ವಿಶಿಷ್ಟ ಶಕ್ತಿಗಳ ಸಂಗಮ. ಮಮತೆ, ಕರುಣೆ, ವಾತ್ಸಲ್ಯ, ಅಕ್ಕರೆ ಮತ್ತು ತಾಳ್ಮೆಯುಳ್ಳ ಸ್ತ್ರೀ ಒಂದು ಪ್ರಬಲ ಶಕ್ತಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೆಣ್ಣು ಒಂದು ಗಂಡಿನ ಜೀವನದಲ್ಲಿ ತಾಯಿಯಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ಮಗಳಾಗಿ ತನ್ನ ಮಹತ್ವಪೂರ್ಣ ಕಾರ್ಯವನ್ನು ನಿರ್ವಹಿಸುತ್ತಾಳೆ. ಮಹಿಳೆ ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೆ ಪ್ರತಿನಿತ್ಯ ಮನೆಯ ಎಲ್ಲಾ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಿ ಸಮಾಜದಲ್ಲಿ “ಹೌಸ್ ವೈಫ್” ಎಂಬ ಹೆಸರಿನಿಂದ ಗುರುತಿಸಿಕೊಳ್ಳುತ್ತಾಳೆ. […]