ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಜಾವೆಲಿನ್ ಥ್ರೋ ನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಅಥ್ಲೀಟ್ ವಿಭಾಗದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜಾವೆಲಿನ್ ಥ್ರೋನಲ್ಲಿ 87.58 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪಕದ ಲಭಿಸಿದೆ.