ಇಂದಿರಾನಗರ ಮಹಿಳೆಯ ಸಾವಿನ ಪ್ರಕರಣ: ಸಿಒಡಿ ತನಿಖೆ ಆರಂಭ- ಡಿಸಿ ಜಗದೀಶ್
ಉಡುಪಿ: ಇಂದಿರಾನಗರದ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದ ತನಿಖೆಗಾಗಿ ನೇಮಿಸಲಾಗಿದ್ದ ತಜ್ಞ ವೈದ್ಯರ ತನಿಖೆ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆ ಹಾಗೂ ಎಫ್ ಎಸ್ ಎಲ್ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ನಗರಸಭೆ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತ ಸಭೆಯಲ್ಲಿ ಸದಸ್ಯರೊಬ್ಬರು ಎತ್ತಿದ ಪ್ರಶ್ನೆಗೆ ಉತ್ತರಿಸಿದರು. ಮಹಿಳೆಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ಸಿಒಡಿ ತನಿಖೆಯು ನಡೆಯುತ್ತಿದೆ ಎಂದು […]