ಇಂದ್ರಾಳಿ ರೈಲ್ವೆ ಬ್ರಿಡ್ಜ್ ರಸ್ತೆ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಜಿಲ್ಲಾಧಿಕಾರಿಗೆ ಸಭೆಯಲ್ಲಿ ರಾ.ಹೆ ಅಧಿಕಾರಿಗಳಿಂದ ಮಾಹಿತಿ
ಉಡುಪಿ: ಮಂಗಳವಾರದಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿ ಸಭೆಯು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಮತ್ತು ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ ನಿಂದ ತಡೆ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ […]