ಇಂದ್ರಾಳಿ: ಎಂಸಿಸಿ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ
ಇಂದ್ರಾಳಿ: ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇಂದ್ರಾಳಿಯಲ್ಲಿ ವೇಗವಾಗಿ ಬರುತ್ತಿದ್ದ ರೈಲಿನೆದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜನವರಿ 25ರ ಬುಧವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಮೃತರನ್ನು ಹೆಬ್ರಿಯ ರಾಘವೇಂದ್ರ ಹೆಗಡೆ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳದ ಬಳಿ ಕಾರು ಪತ್ತೆಯಾಗಿದ್ದು, ಕಾರಿನ ಮೇಲೆ ‘ಮಂಗಳೂರು ಮಹಾನಗರ ಪಾಲಿಕೆ – ಮುಖ್ಯ ಲೆಕ್ಕಾಧಿಕಾರಿ’ ಎಂದು ಅಧಿಕೃತ ಬೋರ್ಡ್ ಇದೆ. ಮೂಲಗಳ ಪ್ರಕಾರ, […]
ಇಂದ್ರಾಳಿ ರಸ್ತೆ ಕಾಮಗಾರಿ: ಘನ ವಾಹನಗಳಿಗೆ ಪರ್ಯಾಯ ಮಾರ್ಗ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ ಸೇತುವ ಮೂಲಕ ಭಾರೀ ವಾಹನ ಸಂಚಾರವನ್ನು ಕಡ್ಡಾಯವಾಗಿ ನಿರ್ಬಂಧಿಸಿದ್ದು, ವಾಹನಗಳ ದಟ್ಟಣಿಕೆಯಿಂದ ಸುಗಮ ಸಂಚಾರಕ್ಕೆ ಉಳಿದ ವಾಹನಗಳಿಗೆ ಅಡಚಣೆಯಗುತ್ತಿರುವ ಹಿನ್ನಲೆ ಇತರ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕೆಂದು ಸೂಚಿಸಲಾಗಿದೆ. ಕುಂದಾಪುರ ಕಡೆಯಿಂದ ಬರುವ ಘನವಾಹನಗಳು ಅಂಬಾಗಿಲು-ಪೆರಂಪಳ್ಳಿ-ಮಣಿಪಾಲ ರಸ್ತೆಯ ಮೂಲಕ ಚಲಿಸುವುದು. ಉಡುಪಿಯಿಂದ ಬರುವ […]
ಅನಾಥ ಬಾಲಕನ ಪೋಷಕರ ಪತ್ತೆಗೆ ಮನವಿ
ಉಡುಪಿ: ನಗರದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಅನಾಥವಾಗಿ ಸಿಕ್ಕಿದ್ದ ಅಶ್ರಫ್ ಅನ್ಸಾರ್ (16) ಎಂಬ ಬಾಲಕರನ್ನು ರಕ್ಷಣೆ ಮಾಡಿ, ಪುನರ್ವಸತಿ ಕಲ್ಪಿಸಲಾಗಿದ್ದು, ಬಾಲಕನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿಯಲ್ಲಿ ಇಂದ್ರಾಣಿ ನದಿ ಉಳಿಸಿ ಬೃಹತ್ ಅಭಿಯಾನಕ್ಕೆ ಚಾಲನೆ, ಇಂದ್ರಾಣಿ ಶುದ್ಧವಾದರೆ ನಗರದ ಸಮಸ್ಯೆಗಳಿಗೆ ಪರಿಹಾರ: ಶ್ಯಾನ್ ಭಾಗ್
ಉಡುಪಿ ನಗರದಲ್ಲಿ ಇಂದ್ರಾಣಿ ನದಿಯ ಉಳಿವಿಗೆ ಪರಿಸರಾಸಕ್ತ ಯುವಕರ ತಂಡ ಹಮ್ಮಿಕೊಂಡ ಇಂದ್ರಾಣಿ ನದಿ ಉಳಿಸಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಇಂದ್ರಾಳಿ ಆಂಜನೇಯ ದೇವಳದ ಕೆರೆಯ ಬಳಿ ವಾಹನ ಜಾಥಕ್ಕೆ ಚಾಲನೆ ನೀಡಿದ ಮಾನವ ಹಕ್ಕು ರಕ್ಷಣಾ ಪ್ರತಿಷ್ಠಾನ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನ್ ಭಾಗ್ ಅವರು ಮಾತನಾಡಿ, ಇಂದ್ರಾಣಿ ನದಿ ಶುದ್ಧವಾದಲ್ಲಿ ನಗರದ ಹಲವು ಸಮಸ್ಯೆಗಳಿಗೆ ಪರಿಹಾರ ಲಭ್ಯವಾಗಲಿದೆ. ಹಿಂದೆ ಇಂದ್ರಾಣಿ ನದಿ ಉಗಮದಿಂದ ಕಡಲು ಸೇರುವ ಮೊದಲು 8 ದೇಗುಲಗಳ ಸರೋವರವನ್ನು ತುಂಬಿಕೊಂಡು […]
ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ
ಉಡುಪಿ: ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಜು.24ರಂದು ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಅವಿನಾಶ್ ದಿಗಂಬರ್ ಲೋಖಂಡೆ(28) ಬಂಧಿತ ಆರೋಪಿ. ಈತನಿಂದ 40ಸಾವಿರ ರೂ. ವೌಲ್ಯದ 2.40ಕೆ.ಜಿ. ಗಾಂಜಾ ಮತ್ತು 5000ರೂ. ವೌಲ್ಯದ ಮೊಬೈಲ್ ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಪಿ ನಿಶಾ ಜೇಮ್ಸ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ […]