ಉದ್ಯಾವರ ಕೈಗಾರಿಕಾ ವಲಯ ಭೂ ಪರಿವರ್ತನೆ: ಜಿಪಂ ಅಧ್ಯಕ್ಷರ ಆದೇಶಕ್ಕೆ ಹೈಕೋರ್ಟ್ ಶಾಶ್ವತ ತಡೆಯಾಜ್ಞೆ- ಸೊರಕೆ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಏಕಾಏಕಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗಾರಿಕಾ ವಲಯ ಭೂ ಪರಿವರ್ತನೆಗೆ ನೀಡಿದ ಆದೇಶಕ್ಕೆ ಹೈಕೋರ್ಟ್ ಶಾಶ್ವತ ತಡೆಯಾಜ್ಞೆ ನೀಡಿದೆ. ಇದು ಉದ್ಯಾವರ ಗ್ರಾಮಸ್ಥರ ಪರಿಸರ ಉಳಿಸುವ ಹೋರಾಟಕ್ಕೆ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಗೆ ಸಿಕ್ಕಿದ ಜಯ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ವಲಯ ಸ್ಥಾಪನೆಗೆ ಅವಕಾಶ ಕೊಡಬಾರದೆಂದು ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ಸರ್ವಾನುಮತದಿಂದ ತೀರ್ಮಾನ […]