ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಮಗು ಮೃತಪಟ್ಟ ಪ್ರಕರಣ; ಜಿಲ್ಲಾಧಿಕಾರಿ ಮಧ್ಯಪ್ರವೇಶದಿಂದ ಧರಣಿ ತಾತ್ಕಾಲಿಕ ಅಂತ್ಯ

ಕುಂದಾಪುರ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಮಂಗಳವಾರದಂದು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿದ ಸಂತ್ರಸ್ತರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಡಿಎಚ್‍ಓ, ಡಿಸಿ ಬಾರದೇ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರ ಜೊತೆ ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ನಿಂತು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಉಪವಿಭಾಗಾಧಿಕಾರಿ, ಡಿಎಚ್‍ಓ ಹಾಗೂ […]