ಭಾರತೀಯ ಸದ್ಚಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ

ಉಡುಪಿ: ನೆರೆಯ ಕೇರಳದವನಾಗಿದ್ದರೂ ಉಡುಪಿ ಭೇಟಿಯ ಕನಸು ಬಹಳ ತಡವಾಗಿ ನನಸಾಗುತ್ತಿದೆ. ಕಳೆದ ಹಲವು ಶತಮಾನಗಳಿಂದ ಭಾರತೀಯ ಸನಾತನ ಸದ್ವಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರವಾದುದು. ಇವತ್ತು ಶ್ರೀ ಕೃಷ್ಣನ ದರ್ಶನ ಹಾಗೂ ಸ್ವಾಮೀಜಿಯವರ ದರ್ಶನದಿಂದ ಅತ್ಯಂತ ಸಂತೋಷಗೊಂಡಿದ್ದೇನೆ. ಈ ಹಿಂದೆ 1978 ರಲ್ಲಿ ಕೇರಳದಲ್ಲಿ ಸನಾತನ ಧರ್ಮರಕ್ಷಣೆಯ ಸಲುವಾಗಿ ಬೃಹತ್ ಸಂತ ಸಮಾವೇಶ ಮತ್ತು ಹಿಂದು ಸಂಗಮ ನಡೆದಾಗ ಶ್ರೀ ವಿಶ್ವೇಶತೀರ್ಥ ಶ್ರೀಪಾದರೇ ನೇತೃತ್ವ ವಹಿಸಿ ನೀಡಿದ ಮಾರ್ಗದರ್ಶನ ಅವಿಸ್ಮರಣೀಯ. ಆ ಧರ್ಮೋತ್ಸವದಲ್ಲಿ ಸಂಯೋಜಕ […]