ಶೀಂಬ್ರ ಕೃಷ್ಣಾಂಗಾರಕ ಸ್ನಾನಘಟ್ಟಕ್ಕೆ ಶಿಲಾನ್ಯಾಸ: ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮಹತ್ವದ ಹೆಜ್ಜೆ; ಸೋದೆ ಶ್ರೀ
ಉಡುಪಿ: ಶ್ರೀ ವಾದಿರಾಜ ಗುರುಸಾರ್ವಭೌಮರು ತಮ್ಮ ‘ತೀರ್ಥಪ್ರಬಂಧ’ ಪ್ರವಾಸಕಥನದಲ್ಲಿ ಉಲ್ಲೇಖಿಸಿದ ಉಡುಪಿಯ ಜೀವನದಿ ಸ್ವರ್ಣೆಯ ತೀರದಲ್ಲಿರುವ ಪುರಾಣ ಪ್ರಸಿದ್ಧ ಕೃಷ್ಣಾಂಗಾರಕ ಸ್ನಾನ ಘಟ್ಟದಲ್ಲಿ ಸುಸಜ್ಜಿತ ಸ್ನಾನಘಟ್ಟಕ್ಕೆ ಚಾಲನೆ ದೊರೆತಿರುವುದು ಉಡುಪಿಯ ಧಾರ್ಮಿಕ ಪ್ರವಾಸೋದ್ಯಮದ ಪ್ರಗತಿಗೆ ಒಂದು ಮಹತ್ವದ ಹೆಜ್ಜೆ ಎಂದು ಸೋದೆ ಮಠಾಧೀಶ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದ್ದಾರೆ. ಪೆರಂಪಳ್ಳಿ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಸ್ವರ್ಣಾನದೀ ತೀರದಲ್ಲಿ ನೂತನ ಕೃಷ್ಣಾಂಗಾರಕ ಸ್ನಾನಘಟ್ಟ ನಿರ್ಮಾಣಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು. ಪವಿತ್ರವಾದ ಈ ಸ್ಥಳಕ್ಕೆ ವರ್ಷಂಪ್ರತಿ ತೀರ್ಥ […]