ಆರನೇ ತರಗತಿಯ ಪಾಠದಲ್ಲಿ ಹಿಂದೂ ಧರ್ಮಕ್ಕೆ ಅವಮಾನ: ಪಾಠ ಕೈಬಿಡುವಂತೆ ಶಿಕ್ಷಣ ಸಚಿವರ ಆದೇಶ

ಉಡುಪಿ: ಹಿಂದೂ ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ಅಂಶಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆರನೇ ತರಗತಿಯ ಸಾಮಾಜಶಾಸ್ತ್ರ ಪಾಠವನ್ನು ಕೈ ಬಿಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆದೇಶಿಸಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಅಂಶಗಳ ಬಗ್ಗೆ ಉಡುಪಿಯ ಅದಮಾರು ಮಠದ ಪರ್ಯಾಯ ಈಶಪ್ರಿಯತೀರ್ಥ ಸ್ವಾಮೀಜಿ ಆಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು. ವಿವಾದಕ್ಕೆ ಕಾರಣ ಆಗಿದ್ದೇನು: ಕೈ ಬಿಟ್ಟ ಪಾಠದಲ್ಲಿ ಉತ್ತರ ವೇದ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ-ಯಜ್ಞಗಳ ಹೆಸರಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು […]