ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಮೀನುಗಾರರಿಗಾಗಿ ವಿಮಾ ಯೋಜನೆ
ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರ ಹಾಗೂ ವಿಮೆ ಸೌಲಭ್ಯಕ್ಕಾಗಿ ನಾಮನಿರ್ದೇಶನ ಮಾಡುವ ಕುಟುಂಬ […]