ವಿದ್ಯಾರ್ಥಿಗಳು ಸೇವಾ ಮನೋಭಾವ ನಾಯಕತ್ವ ಬೆಳೆಸಿಕೊಳ್ಳಿ: ಅನಂತ ಪದ್ಮನಾಭ

ಉಡುಪಿ: ವಿದ್ಯಾರ್ಥಿಗಳು ಸೇವಾ ಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಾಧ್ಯವಿದೆ ಎಂದು ಪೊಲೀಸ್‌ ಉಪನಿರೀಕ್ಷಕ ಅನಂತ ಪದ್ಮನಾಭ ಹೇಳಿದರು. ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಇಂಟರ್ಯಕ್ಟ್ ಕ್ಲಬ್‌ ಉದ್ಘಾಟನಾ ಸಮಾರಂಭದಲ್ಲಿ ‘ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ’ ವಿಷಯದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ತಿಳಿದುಕೊಂಡು ಅದನ್ನು ಇತರರಿಗೂ ತಿಳಿಸಬೇಕು. ಇದರಿಂದ ರಸ್ತೆ ಸುರಕ್ಷತೆಯ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವುದರ ಜತೆಗೆ ರಸ್ತೆ ಅಪಘಾತಗಳನ್ನು […]