ಜ.18ರಿಂದ ಮಲ್ಪೆ ಕಡಲ ಕಿನಾರೆಯಲ್ಲಿ ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ
ಉಡುಪಿ: ಅಂತರರಾಷ್ಟ್ರೀಯ ಬೀಚ್ ದ್ರಾಕ್ಷಾರಸ ಉತ್ಸವ ಮಲ್ಪೆ ಕಡಲ ಕಿನಾರೆಯಲ್ಲಿ ಜ.18ರಿಂದ 20ರ ವರೆಗೆ ನಡೆಯಲಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಟಿ. ಸೋಮು ಈ ಕುರಿತು ಮಾಹಿತಿ ನೀಡಿ, ಕರ್ನಾಟಕದಲ್ಲಿ ವೈನ್ ಉತ್ಪಾದನೆಗೆ ಸೂಕ್ತವಾದ ದ್ರಾಕ್ಷಿ ತಳಿಗಳನ್ನು ಬೆಳೆಯಲು ಮತ್ತು ರಾಜ್ಯದ ವೈನ್ ತಯಾರಿಕೆಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸಿಕೊಡುವುದು ಈ ಉತ್ಸವದ ಮುಖ್ಯ ಉದ್ದೇಶವಾಗಿದೆ ಎಂದರು. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಸುಮಾರು 10ರಿಂದ 12 ವೈನರಿಗಳು ಭಾಗವಹಿಸುವರು. […]