15ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ […]
ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅಸ್ಮಿತಾಯ್ ಪ್ರದರ್ಶನ
ಅಮೇರಿಕಾದ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಿಗೆ ಕೊಂಕಣಿ ಸಿನೆಮಾ ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದೊಂದು […]