ವಸಯಿ: ಮೊಗವೀರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಸಯಿ: ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ ಮಾರ್ಚ್ 26ರಂದು ಸಂಘದ ಕಚೇರಿ. ಬಿ-1೦2, ನ್ಯೂ ವರ್ಷಾ ಕೋಅಪರೇಟಿವ್ ಹೌಸಿಂಗ್ ಸೊಸೈಟಿ, ಆನಂದ ನಗರ ವಸಯಿ ಪಶ್ಚಿಮ ಕಚೇರಿಯ ಕೊರಗಪ್ಪ ಸಾಲ್ಯಾನ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಅತಿಥಿ ಗಾಗೂ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಧಾರ್ಮಿಕ ಚಿಂತಕರಾದ ಪುಷ್ಪ ಜಿ ಬಂಗೇರ ಹಾಗೂ ಪರಿಸರದ […]

ಕಲ್ಯಾಣ್ ಮಿತ್ರ ಮಂಡಲ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ

ಕಲ್ಯಾಣ್: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್ ಪೂರ್ವ ಇದರ ವತಿಯಿಂದ ಮಾರ್ಚ್ 26ರಂದು ಸಂಘದ ಕಚೇರಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನೆ ಕಾರ್ಯಕ್ರಮ ನಡೆಯಿತು. ನಂತರ ತಾಯಿ ಶಾರದಾಂಬೆಗೆ ಧನಂಜಯ ಪಾಲನ್ ರವರಿಂದ ಮಹಾ ಮಂಗಳಾರತಿ ನೆರವೇರಿತು ಹಾಗೂ ರಾಜೇಶ್ ಪೂಜಾರಿ ಅವರಿಂದ ಸಾಮೂಹಿಕ ಪ್ರಾರ್ಥನೆ ಜರುಗಿತು. ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಮಹಿಳಾ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ […]

ಮಹಿಳೆಯರ ನಿರ್ಣಯಕ್ಕೆ ಮನ್ನಣೆ ಸಿಗಬೇಕು: ಶೋಭಾ ಕರಂದ್ಲಾಜೆ

ಉಡುಪಿ: ರಾಜಕೀಯ ಕ್ಷೇತ್ರ, ದೇಗುಲದ ಆಡಳಿತ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಮಹಿಳೆಯರ ಮಾತು, ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ಮಹಿಳೆಯರು ಸಮಾಜದಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸರ್ಕಾರ ಸಹಿತ ಮಹಿಳೆಯರು ಇರುವ ಸಂಘಟನೆಗಳು ಮಹಿಳೆಯರ ಭಾವನೆ, ಮಾತು ಹಾಗೂ ನಿರ್ಣಯಕ್ಕೆ ಗೌರವ ಕೊಡುವ ಕೆಲಸ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀಶಕ್ತಿ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ […]