ನಾಳೆ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 7 […]

ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಉತ್ತಮ ಏಕಾಗ್ರತೆಗಾಗಿ ವಿದ್ಯಾರ್ಥಿಗಳು ಯೋಗ ಮತ್ತು ಧ್ಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಕಾರಾತ್ಮಕ ಮನಸ್ಸಿನ ಆರೋಗ್ಯವಂತ ವ್ಯಕ್ತಿಯು ಸಮಾಜಕ್ಕೆ ಹೆಚ್ಚಿನಕೊಡುಗೆ ನೀಡಬಲ್ಲ. ಯೋಗ ಇಂದಿನ ಅಗತ್ಯಗಳಲ್ಲಿ ಒಂದು. ಆಧುನಿಕ ಜೀವನಶೈಲಿಯಿಂದಾಗಿ ಒತ್ತಡ, ಖಿನ್ನತೆ, ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗುತ್ತಿದ್ದುಇದಕ್ಕೆ ಅಷ್ಟಾಂಗ ಯೋಗಗಳು ಸಹಕಾರಿ. ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.ಯೋಗ ಆರೋಗ್ಯವರ್ಧಕ ಹಾಗೂ ರೋಗ ನಿವಾರಕ ಎಂದು ದಕ್ಷಿಣಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ಯೋಗ […]

ಯೋಗ ಭಾರತದ ಪ್ರಾಚೀನ ಪರಂಪರೆಯು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ: ಮಟ್ಟಾರು ರತ್ನಾಕರ ಹೆಗ್ಡೆ

ಉಡುಪಿ: ಇಂದಿನ ಯಾಂತ್ರಿಕ ಬದುಕಿನಲ್ಲಿ ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೆ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದು ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ಯೋಗ ಭಾರತದ ಪ್ರಾಚೀನ ಪರಂಪರೆಯು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ […]

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ

ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ಪ.ಪೂ .ಕಾಲೇಜಿನಲ್ಲಿ ‘ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಯೋಗದಿನವನ್ನು ಆಚರಿಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಘವೇಂದ್ರ ರಾವ್ ಮಾತನಾಡಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ದೈಹಿಕ ದೃಢತೆ ಮತ್ತು ಮಾನಸಿಕ ಏಕಾಗ್ರತೆ ಗಳಿಸಲು ಸಾಧ್ಯ. ಪ್ರತಿದಿನ ಯೋಗಾಭ್ಯಾಸ ಮಾಡಿದಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದರು. ವಿದ್ಯಾ ಸಂಸ್ಥೆಯ ಉಪನ್ಯಾಸಕ ಡಾ.ಆದಂ ಶೇಕ್, ರಾಜೇಶ್ ಶೆಟ್ಟಿ, ಶಿವಕುಮಾರ್ ಉಪಸ್ಥಿತರಿದ್ದರು. ಸಂಸ್ಥೆಯ ಸುಮಾರು 425 ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮಾ. ಸುಚಾಂಕ್ಷ್ ಯೋಗಾಸನ […]

ಅಂತಾರಾಷ್ಟ್ರೀಯ ದಿನ ರೇಖೆಯಲ್ಲಿ ಭಾರತೀಯ ನೌಕಾ ಪಡೆಯ ಯೋಗ ದಿನಾಚರಣೆ

ನವದೆಹಲಿ: ಭಾರತದ ಪೂರ್ವದಲ್ಲಿ ನಿಯೋಜಿಸಲಾದ ಭಾರತೀಯ ನೌಕಾಪಡೆಯ ಯುದ್ಧನೌಕೆ, ಐ ಎನ್ ಎಸ್ ಸಾತ್ಪುರ, ಪೆಸಿಫಿಕ್ ಮಹಾಸಾಗರದ ಮಧ್ಯದಲ್ಲಿ ಅಂತರಾಷ್ಟ್ರೀಯ ದಿನ ರೇಖೆಯ ಬಳಿ ಕಾರ್ಯನಿರ್ವಹಿಸುತ್ತಿದ್ದು, ಸಮುದ್ರದಲ್ಲಿ ಸಾಮಾನ್ಯ ಯೋಗ ಶಿಷ್ಟಾಚಾರವನ್ನು ನಡೆಸುವ ಮೂಲಕ ಭಾರತೀಯ ನೌಕಾಪಡೆಯ ಯೋಗ ಚಟುವಟಿಕೆಗಳ ಅಂತರರಾಷ್ಟ್ರೀಯ ದಿನವನ್ನು ಪ್ರಾರಂಭಿಸಿತು.