ಜೂನ್ 15 ರವರೆಗೆ ಮಣಿಪುರದಲ್ಲಿ ಇಂಟರ್ನೆಟ್ ನಿಷೇಧ ವಿಸ್ತರಣೆ
ಮಣಿಪುರ: ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರ ಇನ್ನೂ ಐದು ದಿನಗಳವರೆಗೆ (ಜೂನ್ 15 ರವರೆಗೆ) ವಿಸ್ತರಿಸಿದೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿ ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಅಂತರ್ಜಾಲ ನಿಷೇಧವನ್ನು ಮುಂದಿನ ಐದು ದಿನಗಳವರೆಗೆ ವಿಸ್ತರಿಸಲಾಗಿದೆ” ಎಂದು ಅಧಿಕೃತ ಪ್ರಕಟಣೆ ಮೂಲಕ ತಿಳಿಸಲಾಗಿದೆ.ಕೆಲವು ಸಮಾಜ ವಿರೋಧಿ ಚಟುವಟಿಕೆಗಳನ್ನು ಪ್ರಚೋದಿಸುವ ಫೋಟೋಗಳು, ದ್ವೇಷದ ವಿಡಿಯೋ ಸಂದೇಶಗಳು ಮತ್ತು ಭಾಷಣ ಪ್ರಸಾರ ಮಾಡಲು ಸಾಮಾಜಿಕ […]