ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ, ಫೆ.14: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಅರ್ ಅಂಬೇಡ್ಕರ್ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿ ಸ್ವಂತ ನಿವೇಶನ ಹೊಂದಿರುವ, ಸರ್ಕಾರದ ಸಹಾಯಧನವನ್ನು ಹಂತವಾರು ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ವಸತಿ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ನಿವಾಸಿಯಾಗಿರುವ, ವಾರ್ಷಿಕ 87600 ರೂ. ಕ್ಕಿಂತ ಕಡಿಮೆ ಆದಾಯ ಹೊಂದಿರುವ ಅರ್ಹ ಫಲಾನುಭವಿಗಳು ಏಳು ದಿನಗಳ ಒಳಗಾಗಿ ಕಾರ್ಕಳ ಪುರಸಭಾ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಛೇರಿಯನ್ನು […]