ಸ್ವಯಂ ಉದ್ಯೋಗ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ: ಭೋವಿ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿನ ನಿರುದ್ಯೋಗಿ ಯುವ ಜನರಿಗೆ ಸ್ವಯಂ ಉದ್ಯೋಗ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಭೋವಿ, ಅಭಿವೃದ್ಧಿ ನಿಗಮ, “ಬಿ” ಬ್ಲಾಕ್, 2ನೇ ಮಹಡಿ ಕೊಠಡಿ ಸಂಖ್ಯೆ 307, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574884 ಗೆ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಶೈಲಜಾ ದೇಶ್‌ಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.