ಶೇ 7ರಷ್ಟು ಮಾರುಕಟ್ಟೆ ಪಾಲು ಪಡೆದ ಆಯಪಲ್ : ಭಾರತೀಯರಲ್ಲಿ ಹೆಚ್ಚುತ್ತಿದೆ ಐಫೋನ್ ಒಲವು
ನವದೆಹಲಿ: ಭಾರತದಲ್ಲಿ ಐಫೋನ್ಗಳ ಜನಪ್ರಿಯತೆ ಹೆಚ್ಚಾಗುತ್ತಿದ್ದು, ಆಯಪಲ್ ತನ್ನ ಮಾರುಕಟ್ಟೆ ಪಾಲನ್ನು ಹೆಚ್ಚಿಸಿಕೊಳ್ಳುತ್ತಿದೆ.ಈಗ ಭಾರತದಲ್ಲೇ ತನ್ನ ಸ್ಮಾರ್ಟ್ಫೋನ್ಗಳನ್ನು ತಯಾರಿಸುತ್ತಿರುವ ಆಯಪಲ್ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಶೇ 7ರಷ್ಟು ಪಾಲು ಪಡೆಯುವತ್ತ ಮುನ್ನಡೆದಿದೆ. ವರ್ಷದ ಮೊದಲಾರ್ಧದಲ್ಲಿ ಆಯಪಲ್ ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಶೇಕಡಾ 6 ರಷ್ಟು ಮಾರುಕಟ್ಟೆ ಪಾಲನ್ನು ಪಡೆದುಕೊಂಡಿದೆ ಮತ್ತು ಸೂಪರ್-ಪ್ರೀಮಿಯಂ ಸ್ಮಾರ್ಟ್ಫೋನ್ ವಿಭಾಗದಲ್ಲಿ (50,000-100,000 ರೂ.ಗಳ ನಡುವೆ ಬೆಲೆ) ಪ್ರಾಬಲ್ಯ ಸಾಧಿಸಿದೆ ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಸೈಬರ್ ಮೀಡಿಯಾ ರಿಸರ್ಚ್ (ಸಿಎಂಆರ್) ಅಂಕಿ ಅಂಶಗಳು […]