ಐಪಿಎಲ್ 14ನೇ ಆವೃತ್ತಿ: ಉಳಿದಿರುವ ಪಂದ್ಯಗಳ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್
ನವದೆಹಲಿ: ಐಪಿಎಲ್ -2021ರ ಮುಂದುವರಿದ ಪಂದ್ಯಗಳು ಯುಎಇನಲ್ಲಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಇಂದು ತಿಳಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಪಂದ್ಯಗಳು ಆಯೋಜನೆಗೊಳ್ಳಲಿವೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಾವಳಿಗಳನ್ನು ಅರ್ಧಕ್ಕೆ ಮೊಟಕುಗೊಳಿಸಿ ಮುಂದೂಡಿತ್ತು. ಆ ಬಳಿಕ ಮೇ 29ರಂದು ನಡೆದ ಸಭೆಯಲ್ಲಿ ಯುಎಇನಲ್ಲಿ ಪಂದ್ಯ ಆಯೋಜನೆ ಮಾಡಲು ಬಿಸಿಸಿಐ ತೀರ್ಮಾನಿಸಿತ್ತು. […]