ಮಾಜಿ IPS ಅಧಿಕಾರಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖನೌದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಲೈಸನ್ಸ್ ಹೊಂದಿದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಲಖನೌದಲ್ಲಿ ನಡೆದಿದೆ. “ನನ್ನ ಈ ಸಾವಿಗೆ ನಾನೇ ಹೊಣೆ” ಎಂದು ಮಾಜಿ ಅಧಿಕಾರಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಸ್ಥಳದಲ್ಲಿ ದೊರೆತಿದೆ. ದಿನೇಶ್ ಕುಮಾರ್ ಶರ್ಮಾ (73) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಇಲ್ಲಿನ ಗೋಮತಿ […]