NIAಯ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದ ದೆಹಲಿ ಪೊಲೀಸ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಭಯೋತ್ಪಾದನಾ ನಿಗ್ರಹ ದಳದ ದೊಡ್ಡಕಾರ್ಯಾಚರಣೆಯ ವೇಳೆ ದೆಹಲಿಯಲ್ಲಿ ಬಂಧಿಸಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯ ಅಡಗುತಾಣದಿಂದ ಬಂಧಿಸಿದೆ. ದೆಹಲಿ ಪೊಲೀಸರ ವಿಶೇಷ ಸೆಲ್ NIA ಯೊಂದಿಗೆ ಸಹಕರಿಸಿದೆ. ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್‌ಗಳೆಂದು ಶಂಕಿಸಲಾದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ […]

ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ

ತಿರುವನಂತಪುರಂ: ಶುಕ್ರವಾರ ಮಧ್ಯಂತರ ಆದೇಶ ನೀಡಿದ ಕೇರಳ ಹೈಕೋರ್ಟ್, ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ನೀಡಿದ ‘ಎ’ ಪ್ರಮಾಣೀಕರಣವನ್ನು ಕಾನೂನುಬಾಹಿರ ಎಂದು ಘೋಷಿಸಲು ನಿರಾಕರಿಸಿದೆ. ನಾಗರೇಶ್ ಮತ್ತು ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠವು ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆ ಶುಕ್ರವಾರ ಕೇರಳದಲ್ಲಿ ಬಿಡುಗಡೆಯಾದ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. […]

ಭಾರತ ಸರ್ಕಾರದ ಪ್ರತಿನಿಧಿಯ ಹತ್ಯೆ ಸಂಚು ರೂಪಿಸಿದ್ದ ಐಸಿಸ್ ಆತ್ಮಹತ್ಯಾ ಬಾಂಬರ್ ರಷ್ಯಾದಲ್ಲಿ ಬಂಧನ

ಮಾಸ್ಕೋ: ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (ಎಫ್‌ಎಸ್‌ಬಿ) ಭಾರತ ಸರ್ಕಾರದ ಪ್ರತಿನಿಧಿಯ ವಿರುದ್ಧ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಐಸಿಸ್ ಆತ್ಮಹತ್ಯಾ ಬಾಂಬರ್ ಅನ್ನು ಬಂಧಿಸಿದೆ ಎಂದು ರಷ್ಯಾದ ಮಾಧ್ಯಮದಲ್ಲಿ ವರದಿಯಾಗಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ದಾಯೆಶ್ ಭಯೋತ್ಪಾದಕ ಭಾರತದ ಗಣ್ಯ ನಾಯಕರೊಬ್ಬರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದ ಎನ್ನಲಾಗಿದೆ. ಸದ್ಯ ಹೊರ ಬರುತ್ತಿರುವ ಮಾಹಿತಿಗಳ ಪ್ರಕಾರ ಬಂಧಿತ ಭಯೋತ್ಪಾದಕ ಟರ್ಕಿಯಲ್ಲಿ ಐಸಿಸ್ ಗೆ ದಾಖಲಾಗಿದ್ದ. ರಷ್ಯಾದಲ್ಲಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತರಾಷ್ಟ್ರೀಯ […]