ಇಸ್ರೇಲಿನಲ್ಲಿ ಮತ್ತೊಮ್ಮೆ ಬೆಂಜಮಿನ್ ನೆತನ್ಯಾಹು ಸರ್ಕಾರ್: ಮಿತ್ರನಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಟೆಲ್ ಅವೀವ್: ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಆಡಳಿತ ನಡೆಸಲು ಸಜ್ಜಾಗಿರುವ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಹೀಬ್ರೂ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದು, “ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ. מזל טוב ידידי @netanyahu על הצלחתך בבחירות. אני מצפה להמשיך במאמצים המשותפים שלנו להעמקת […]