274 ಭಾರತೀಯರನ್ನು ಇಸ್ರೇಲ್ನಿಂದ ಹೊತ್ತು ಸ್ವದೇಶದತ್ತ ಬರುತ್ತಿರುವ ನಾಲ್ಕನೇ ವಿಮಾನ
ಟೆಲ್ ಅವೀವ್ (ಇಸ್ರೇಲ್) : ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದ್ದು, ಈ ಸಂಬಂಧ ಯುದ್ಧ ಪೀಡಿತ ಇಸ್ರೇಲ್ನಲ್ಲಿ ನೆಲೆಸಿರುವ ಭಾರತೀಯರನ್ನು ಕರೆತರುವ ಕಾರ್ಯ ಭರದಿಂದ ಸಾಗುತ್ತಿದೆ.ಆಪರೇಷನ್ ಅಜಯ್ ಕಾರ್ಯಾಚರಣೆಯ ಭಾಗವಾಗಿ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನವು ಭಾನುವಾರ ಮುಂಜಾನೆ ಇಸ್ರೇಲ್ನಿಂದ ಭಾರತಕ್ಕೆ ಹೊರಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.ಸಂಘರ್ಷ ಪೀಡಿತ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನ ಭಾರತಕ್ಕೆ ಆಗಮಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. […]