ಮಾನವಸಹಿತ ‘ಗಗನಯಾನ’​ ಅಕ್ಟೋಬರ್ 21ಕ್ಕೆ ಮೊದಲ ಹಾರಾಟ ಪರೀಕ್ಷೆ: ಇಸ್ರೋ

ನವದೆಹಲಿ: ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ತಿಳಿಸಿತು. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ […]