ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್​ನ ರಮೇಶ್ ಬಾಬು ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್​ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ […]