ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಅಗತ್ಯ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉತ್ತಮ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದರು. ವೃತ್ತಿಪರ ಶಿಕ್ಷಣಕ್ಕೆ ಅಣಿಯಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು […]