ಭಾರತದಲ್ಲಿ ತೆರಿಗೆ ವಂಚನೆಯನ್ನು ಒಪ್ಪಿಕೊಂಡ ಬಿಬಿಸಿ: 40 ಕೋಟಿ ರೂ ಕಡಿಮೆ ಆದಾಯ ವರದಿ
ನವದೆಹಲಿ: ಮಾಧ್ಯಮ ದೈತ್ಯ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಭಾರತದಲ್ಲಿ ಕಡಿಮೆ ತೆರಿಗೆಯನ್ನು ಪಾವತಿಸಿರಬಹುದು ಎಂದು ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಿಬಿಸಿ ತನ್ನ ನೈಜ ಹೊಣೆಗಾರಿಕೆಗಿಂತ ಕಡಿಮೆ ತೆರಿಗೆಯನ್ನು ಪಾವತಿಸಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಇಬ್ಬರು ಅಧಿಕಾರಿಗಳ ವರದಿ ಹೇಳಿದೆ. ಸಂಸ್ಥೆಯು ತೆರಿಗೆ ಇಲಾಖೆಗೆ ಬರೆದ ಇಮೇಲ್‌ನಲ್ಲಿ, ಮಂಡಳಿಯು ಪತ್ತೆ ಮಾಡಿದ ಆದಾಯ ಕಡಿಮೆ ವರದಿ ಮಾಡಿರುವುದನ್ನು ಒಪ್ಪಿಕೊಂಡಿದೆ. ಇದು ‘ತೆರಿಗೆ ವಂಚನೆ’ಗೆ ಸಮನಾಗಿರುತ್ತದೆ, ಅದಕ್ಕಾಗಿ ಅದು ಚೇತರಿಕೆ […]
ಮೈಸೂರು: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ; 1 ಕೋಟಿ ವಶ
ಮೈಸೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯೋಗವು ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ, ಅಕ್ರಮ ಹಣದ ಕಂತೆ ಕಂತೆಗಳು ಎಗ್ಗಿಲ್ಲದೆ ಅತ್ತಿಂದಿತ್ತ ಚಲಿಸುತ್ತಿವೆ. ಇದೀಗ ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಒಂದು ಕೋಟಿ ರೂಪಾಯಿ ವಶಪಡಿಸಿಕೊಂಡಿದೆ. ಸುಬ್ರಮಣ್ಯ ರೈ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರನಾಗಿದ್ದಾರೆ. ಕಳೆದ ಕೆಲವು ವಾರಗಳಿಂದ ಐಟಿ ಇಲಾಖೆಯು ಕರ್ನಾಟಕದಲ್ಲಿ ಚುನಾವಣಾ ಸರಮಾಲೆಯ ದಾಳಿಗಳನ್ನು ನಡೆಸಿದೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು ಹಾಗೂ ದಕ್ಷಿಣ […]
ಡಾ. ಜಿ ಶಂಕರ್ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ನಿಂದ ಖಂಡನೆ
ಉಡುಪಿ: ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಮೋದಿ ಸರಕಾರ ಮಾಡಿದ ಬಹುದೊಡ್ಡ ಅವಮಾನ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಗವೀರ ಸಮುದಾಯವನ್ನು ತಳಮಟ್ಟದಿಂದ ಮೇಲೆತ್ತುವುದರೊಂದಿಗೆ, ಸರ್ವರನ್ನು ಒಗ್ಗೂಡಿಸುವ ಮೂಲಕ ಸಮಾಜದಲ್ಲಿ ಸಂಘಟನೆಯನ್ನು ಬಲ ಪಡಿಸುವ ಬಹುದೊಡ್ಡ ಕೆಲಸವನ್ನು ಡಾ. ಜಿ ಶಂಕರ್ ಕಳೆದ ಹಲವಾರು […]