ಕರಾವಳಿಯ ಚಿನ್ನಾಭರಣ ಮಳಿಗೆಯಲ್ಲಿ ಐಟಿ ಸಂಸ್ಥೆ ಅಧಿಕಾರಿಗಳಿಂದ ತನಿಖೆ

ಉಡುಪಿ/ಮಂಗಳೂರು: ಸೋಮವಾರದಂದು ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಉಡುಪಿ ಹಾಗೂ ಮಂಗಳೂರಿನ ಪ್ರಸಿದ್ದ ಚಿನ್ನಾಭರಣ ಮಳಿಗೆಯೊಂದರಲ್ಲಿ ಐಟಿ ತನಿಖೆ ನಡೆದಿದೆ. ಉಡುಪಿ, ಮಂಗಳೂರು ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಕಾರ್ಯನಿರ್ವಹಿಸುತ್ತಿರುವ ಚಿನ್ನದ ಮಳಿಗೆಗಳ ಆದಾಯ ತೆರಿಗೆ ದಾಖಲೆಗಳ ಪರಿಶೀಲನೆ ನಡೆದಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಎಲ್ಲಾ ಕಡೆಯ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.