ರಾಜ್ಯದ ಐಟಿಐ ಕಾಲೇಜುಗಳು ₹ 5000 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ: ಸಚಿವ ಡಾ. ಅಶ್ವಥ್ ನಾರಾಯಣ್
ಉಡುಪಿ: ರಾಜ್ಯದಲ್ಲಿನ 150 ಐ.ಟಿ.ಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೆಲ್ದರ್ಜೆಗೆ ಏರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಉಪ್ಪೂರು ನಲ್ಲಿ ಸರಕಾರಿ ಉಪಕರಣಾಗಾರ ಮತ್ತು ನೂತನ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 1200 ಸರಕಾರಿ ಮತ್ತು ಖಾಸಗಿ ಐ.ಟಿ.ಐ ಕಾಲೇಜುಗಳಿದ್ದು, ಸರಕಾರಿ ಐಟಿಐ ಕಾಲೇಜುಗಳಲ್ಲಿ ಕೌಶಲ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ ರಾಜ್ಯ ಸರ್ಕಾರವು […]