ದೇಶದ ಬೆಳವಣಿಗೆಯಲ್ಲಿ ಐ.ಟಿ.ಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಅಂಡಾರು ದೇವಿ ಪ್ರಸಾದ್ ಶೆಟ್ಟಿ
ಉಡುಪಿ: ದೇಶದ ಬೆಳವಣಿಗೆಗೆ ಕೈಗಾರಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ಐ.ಟಿ.ಐ ತರಬೇತಿ ಹೊಂದಿದ ವಿದ್ಯಾರ್ಥಿಗಳ ಭಾಗೀದಾರಿಕೆ ಉಲ್ಲೇಖನೀಯವಾದುದು ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಇಂದು ಮಣಿಪಾಲ ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಡುಪಿ ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ […]