ಬಿಜೆಪಿ ಸರ್ಕಾರ ಹೆಚ್ಚು ಕಾಲ ಇರಲ್ಲ: ಐವನ್ ಡಿಸೋಜಾ, ವ್ಯಂಗ್ಯ

ಮಂಗಳೂರು:  ರಾಜ್ಯ ಬಿಜೆಪಿಯಲ್ಲಿ ಈಗಾಗಲೇ ಭಿನ್ನಮತ ಸ್ಫೋಟಗೊಂಡಿದೆ. ಹೀಗಾಗಿ ಬಿಜೆಪಿ ಸರ್ಕಾರ ಆರು ತಿಂಗಳು ಸಹ ಇರಲ್ಲ ಎಂದು ಸ್ವತಃ ಬಿಜೆಪಿ ಹೈಕಮಾಂಡೇ ಸೂಚನೆ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಭಿನ್ನಮತ ಸಿ.ಟಿ. ರವಿಯಿಂದ ಪ್ರಾರಂಭವಾಗಿದೆ. ಇದು ಹೊಸ ದಿಕ್ಕೊಂದನ್ನು ಪಡೆಯಲಿದೆ. ಇಂದಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಬಿಜೆಪಿ ಸರ್ಕಾರ ಹೆಚ್ಚು ಕಾಲ ಇರಲ್ಲ ಎಂಬುದು ಸ್ಪಷ್ಟವಾಗುತ್ತದೆ. ರಾಜ್ಯದಲ್ಲಿ ಸರ್ಕಾರ […]