ಎಐಸಿಸಿ ಕಾರ್ಯದರ್ಶಿಯಾಗಿ ಐವನ್ ಡಿಸೋಜ ನೇಮಕ

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷ) ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ. ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಬೆನ್ನಲ್ಲೆ ಐವನ್ ಡಿಸೋಜ ಅವರಿಗೆ ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ. ಐವನ್ ಅವರು ಈ ಹಿಂದೆ ಕೇರಳ ರಾಜ್ಯದ ಇಡ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. […]